Thyagarthi : ಆನೆ ದಾಳಿಯಿಂದ ತತ್ತರಿಸಿದ ರೈತರಿಗೆ ಶಾಸಕ ಬೇಳೂರು ಧೈರ್ಯ – ಪರಿಹಾರ ಭರವಸೆ

Photo of author

By vishwachetana807@gmail.com

ತ್ಯಾಗರ್ತಿ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ಅವರು ತ್ಯಾಗರ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಆನೆಗಳ ದಾಳಿಯಿಂದ ಉಂಟಾದ ಬೆಳೆ ಹಾನಿಯನ್ನು ಪರಿಶೀಲಿಸಿದರು.
ಆನೆ ದಾಳಿಯಿಂದ ಬಾಳೆ ತೋಟಗಳು ಸೇರಿದಂತೆ ರೈತರ ಜಮೀನುಗಳಿಗೆ ಗಂಭೀರ ಹಾನಿಯಾಗಿರುವುದನ್ನು ವೀಕ್ಷಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತ್ಯಾಗರ್ತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ಹಾನಿಗೊಂಡ ಬಾಳೆ ತೋಟ

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ರಶ್ಮಿ ಹಾಲೆಶ್ ಅವರು ಸ್ಥಳದಲ್ಲಿದ್ದು, ಹಾನಿಗೊಂಡ ರೈತರ ವಿವರಗಳನ್ನು ದಾಖಲಿಸಿ, ಬೆಳೆ ನಷ್ಟದ ವರದಿ ತಯಾರಿಸುವ ಹಾಗೂ ಸರ್ಕಾರದ ಪರಿಹಾರ ಯೋಜನೆಯಡಿ ಶೀಘ್ರವಾಗಿ ಸಹಾಯಧನ ದೊರಕಿಸುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆನೆ ದಾಳಿಯಿಂದ ಹಾನಿಗೊಂಡ ಬಾಳೆ ತೋಟವನ್ನು ಪರಿಶೀಲಿಸುತ್ತಿರುವ ದೃಶ್ಯ

ರೈತರಿಗೆ ಪರಿಹಾರ ವಿಳಂಬವಾಗದಂತೆ ಅಗತ್ಯ ದಾಖಲೆಗಳನ್ನು ತ್ವರಿತವಾಗಿ ಸಂಗ್ರಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಆನೆ ದಾಳಿಯಿಂದ ಸಂಪೂರ್ಣ ನಾಶಗೊಂಡ ಬಾಳೆ ಬೆಳೆ


ಆನೆ ದಾಳಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಶಾಸಕರು ವೈಯಕ್ತಿಕ ಧನ ಸಹಾಯ ನೀಡಿದರು. ಜೊತೆಗೆ ಸರ್ಕಾರದ ವತಿಯಿಂದಲೂ ಸೂಕ್ತ ಪರಿಹಾರವನ್ನು ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿಾರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Leave a Comment