ತೀರ್ಥಹಳ್ಳಿ ಬಳಿ ಭೀಕರ ಅಪಘಾತ: ನಜ್ಜುಗುಜ್ಜಾದ ಕಾರು, ಇಬ್ಬರ ದುರ್ಮರಣ

Photo of author

By vishwachetana807@gmail.com

ತೀರ್ಥಹಳ್ಳಿ–ಭಾರತೀಪುರ ಬಳಿ ಭೀಕರ ರಸ್ತೆ ಅಪಘಾತ: ಕಾರು ಸಂಪೂರ್ಣ ನಜ್ಜುಗುಜ್ಜು, ಇಬ್ಬರು ಮೃತ್ಯು

ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಸಮೀಪ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಯಿಂದಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ತುರ್ತುವಾಗಿ ಆಂಬುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣ ಪತ್ತೆ ಹಚ್ಚಲಾಗುತ್ತಿದೆ.

Leave a Comment