Bike accident: ರಿಪ್ಪನ್ ಪೇಟೆ ಸಮೀಪದ ದೂನ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ಅಪಘಾತ

Photo of author

By vishwachetana807@gmail.com

ಟಿವಿಎಸ್ ಎಕ್ಸೆಲ್ ಮತ್ತು ಬಜಾಜ್ ಪಲ್ಸರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಾಯಾಳು

ರಿಪ್ಪನ್ ಪೇಟೆ: ಸಮೀಪದ ದೂನ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ರಸ್ತೆ ಅಪಘಾತ ಸಂಭವಿಸಿದೆ.
ಟಿವಿಎಸ್ ಎಕ್ಸೆಲ್ ಹಾಗೂ ಬಜಾಜ್ ಪಲ್ಸರ್ ಬೈಕ್‌ಗಳು ಅಪಘಾತಕ್ಕೀಡಾಗಿವೆ ಎಂದು ಮಾಹಿತಿ ಲಭ್ಯವಾಗಿದೆ.

ಗುಬ್ಬಿಗ ಗ್ರಾಮದ ಸತ್ಯನಾರಾಯಣ ಭಟ್ ಅವರಿಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇನ್ನೋರ್ವರು ಹೊಸನಗರ ಭಾಗದ ರಾಕೇಶ್ ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಿಎಸ್ಐ ರಾಜು ರೆಡ್ಡಿ ಮತ್ತು ತಂಡ ಸ್ಥಳ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Comment