Hosanagara:ಶಾಸಕ ಬಿ.ಕೆ. ಹರಿಪ್ರಸಾದ್ ವಿರುದ್ಧ ಕ್ರಮಕ್ಕೆ ಹೊಸನಗರ ಬಿಜೆಪಿ ಯುವಮೋರ್ಚಾ ಆಗ್ರಹ

Photo of author

By vishwachetana807@gmail.com

ಹೊಸನಗರ: ಇತ್ತೀಚೆಗೆ ವಿಧಾನಮಂಡಲ ಅಧಿವೇಶನದ ವೇಳೆ ರಾಜ್ಯಪಾಲರ ಎದುರು ಕಾಂಗ್ರೆಸ್ ಶಾಸಕ ಬಿ.ಕೆ. ಹರಿಪ್ರಸಾದ್ ತೋರಿದ ಅನಾಚಾರ ವರ್ತನೆಯನ್ನು ಖಂಡಿಸಿ, ತಾಲೂಕು ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು ಹೊಸನಗರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಭರತ್ ರಾಜ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಶಾಸಕ ಬಿ.ಕೆ. ಹರಿಪ್ರಸಾದ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹೊಸನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಶ್ರೀಪತಿ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ, ಪ್ರಧಾನ ಕಾರ್ಯದರ್ಶಿ ಅಂಕಿತ್ ಮೇಕೇರಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಲ್ಕೊಪ್ಪ, ಹೊಸನಗರ ಮಂಡಲ ಟೌನ್ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಹೇಂದ್ರ ಸೇರಿದಂತೆ ಸತ್ಯ, ಮಂಜುನಾಥ್, ಕೃಷ್ಣವೇಣಿ, ಶಶಿಕಲಾ, ಮನೋಜ್ ಪೂಜಾರಿ, ಕೆ.ವಿ. ಮುರಳಿ, ಮಂಜುನಾಥ್ ಗೌವಟೂರು, ಆದರ್ಶ ಉಳ್ತಿಕೊಪ್ಪ, ಪುರುಷೋತ್ತಮ ಬೇದೂರು, ಮಹೇಶ್ ದೇವರಸಲಿಕೆ, ಸತೀಶ್ ಸೋನಲೆ, ಪವನ್ ಗೊರಳ್ಳಿ ಮೊದಲಾದವರು ಭಾಗವಹಿಸಿದ್ದರು.

Leave a Comment