Hosanagara: ಕರಿನಗೊಳ್ಳಿ ಮಾರಿಕಾಂಬಾ ದೇವಸ್ಥಾನದ ವರ್ಧಂತ್ಯೋತ್ಸವ ಸಂಭ್ರಮ

Photo of author

By vishwachetana807@gmail.com

ನಂಬಿಕೆ ವಿಶ್ವಾಸದಲ್ಲಿರಲಿ, ಮೂಢನಂಬಿಕೆಯಲ್ಲಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು


ಹೊಸನಗರ: ತಾಲೂಕಿನ ಎಂ. ಗುಡ್ಡೆಕೊಪ್ಪ ಗ್ರಾಮದ ಕರಿನಗೊಳ್ಳಿಯ ಶ್ರೀ ಮಾರಿಕಾಂಬಾ ದೇವಸ್ಥಾನದ 3ನೇ ವರ್ಷದ ವರ್ಧಂತ್ಯೋತ್ಸವವು ಸಡಗರ ಹಾಗೂ ಭಕ್ತಿಭಾವದಿಂದ ಜರುಗಿತು.

ವರ್ಧಂತ್ಯೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆದವು. ಮಧ್ಯಾಹ್ನ ನೂರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು,
“ಗ್ರಾಮೀಣ ಭಾಗದ ದೇವಸ್ಥಾನಗಳು ಕೇವಲ ಪೂಜಾ ಕೇಂದ್ರಗಳಲ್ಲ, ಅವು ಸಮಾಜವನ್ನು ಒಗ್ಗೂಡಿಸುವ ಕೊಂಡಿಗಳು. ಧಾರ್ಮಿಕ ಟ್ರಸ್ಟ್‌ಗಳ ಮೂಲಕ ಇಂತಹ ಸಾಮಾಜಿಕ ಕಳಕಳಿಯ ಕೆಲಸಗಳು ನಡೆಯುತ್ತಿರುವುದು ಶ್ಲಾಘನೀಯ,” ಎಂದರು.

ಇದೇ ವೇಳೆ ಮಾತನಾಡಿದ ಅವರು,
“ದೇವಿಯ ಸನ್ನಿಧಿಯಲ್ಲಿ ನಾನು ಮುಂದಿನ ಸಚಿವ ಸ್ಥಾನಕ್ಕಾಗಿ ಪ್ರಾರ್ಥಿಸಿದ್ದೇನೆ. ಇಲ್ಲಿ ನಿರ್ಮಾಣವಾಗಿರುವ ಭವ್ಯ ರಂಗಮಂದಿರವು ಊರಿನ ಅಭಿವೃದ್ಧಿಯ ಸಂಕೇತವಾಗಿದೆ. ಭಕ್ತಿಯು ನಂಬಿಕೆ ಮತ್ತು ವಿಶ್ವಾಸದ ಮೇಲೆ ಇರಬೇಕೇ ಹೊರತು ಮೂಢನಂಬಿಕೆಯಿಂದ ಕೂಡಿರಬಾರದು,” ಎಂದು ಕಿವಿಮಾತು ಹೇಳಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಜಿ.ಎನ್. ಅವರು ಮಾತನಾಡಿ, ದೇವಸ್ಥಾನದ ಜೀರ್ಣೋದ್ದಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸರ್ವ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಗಣ್ಯರನ್ನು ದೇವಸ್ಥಾನದ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಜಿ.ಎನ್. ಅವರು ಮಾತನಾಡಿ, ದೇವಸ್ಥಾನದ ಜೀರ್ಣೋದ್ದಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸರ್ವ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಗಣ್ಯರನ್ನು ದೇವಸ್ಥಾನದ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಗೌಡ ,ಮುಂಬಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ, ಉಪಸ್ಥಿತರಿದ್ದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅಧ್ಯಕ್ಷ ಚಿದಂಬರ, ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಮಹೇಂದ್ರ ಬಿ.ಎನ್., ದಿವ್ಯ ಪ್ರವೀಣ್ ಹಾಗೂ ಶಶಿಕಲಾ ಅಣ್ಣಪ್ಪ ಸೇರಿದಂತೆ ಊರಿನ ಗಣ್ಯರು, ಟ್ರಸ್ಟ್‌ನ ಪದಾಧಿಕಾರಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತಾದಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದರು.

Leave a Comment