ತೀರ್ಥಹಳ್ಳಿ: ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ವಸುವೆ ನೇಮಕ

Photo of author

By vishwachetana807@gmail.com

ತೀರ್ಥಹಳ್ಳಿ: ಮಲೆನಾಡಿನ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಕೌಶಿಕ್ ಭಂಡಾರಿ ವಸುವೆ ಅವರು ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಇಂಟೆಕ್ (INTUC) ವಿಭಾಗದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

​ಜಿಲ್ಲಾ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಅವರು ಕೌಶಿಕ್ ಭಂಡಾರಿ ಅವರ ಸಂಘಟನಾ ಶಕ್ತಿಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಿದ್ದಾರೆ.

ಹಿರಿಯ ನಾಯಕರ ಬೆಂಬಲ:ಈ ನೇಮಕಾತಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಆರ್. ಪ್ರಸನ್ನ ಕುಮಾರ್, ಪ್ರಮುಖ ನಾಯಕರಾದ ಶ್ರೀ ಎಂ. ಶ್ರೀಕಾಂತ್ ಅವರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ತೀರ್ಥಹಳ್ಳಿಯ ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ಡಾ. ಆರ್. ಎಂ. ಮಂಜುನಾಥ್ ಗೌಡ ಹಾಗೂ ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ್ ಅವರ ಮಾರ್ಗದರ್ಶನದಲ್ಲಿ ಈ ಆಯ್ಕೆ ನಡೆದಿದೆ.

ನಾಯಕರ ಕೃತಜ್ಞತೆ ಸಲ್ಲಿಸಿದ ಕೌಶಿಕ್ ಭಂಡಾರಿ:
ತಮ್ಮ ನೇಮಕದ ಬಗ್ಗೆ ಸಂತಸ ಹಂಚಿಕೊಂಡಿರುವ ಕೌಶಿಕ್ ಭಂಡಾರಿ ಅವರು, “ನನ್ನ ಮೇಲೆ ನಂಬಿಕೆಯಿಟ್ಟು ಈ ಜವಾಬ್ದಾರಿಯನ್ನು ನೀಡಿದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಹಿರಿಯ ನಾಯಕರಿಗೆ ನಾನು ಚಿರಋಣಿಯಾಗಿದ್ದೇನೆ. ವಿಶೇಷವಾಗಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಯುವ ಸಂಘಟನೆಯ ಉಸ್ತುವಾರಿಗಳಾಗಿರುವ ಶ್ರೀ ಕುರುವಳ್ಳಿ ನಾಗರಾಜ್ ಅವರ ಸಹಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಮುಂಬರುವ ದಿನಗಳಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಮತ್ತು ಯುವಕರ ಶಕ್ತಿ ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ,” ಎಂದು ತಿಳಿಸಿದ್ದಾರೆ.

ಈ ನೂತನ ಆಯ್ಕೆಗೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಕೌಶಿಕ್ ಭಂಡಾರಿ ಅವರ ಅಭಿಮಾನಿಗಳು ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.

ಬರಹ: Chetandas Hosamane

Leave a Comment