
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಷು ಜಾತ್ರೆಯ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿರುವುದರಿಂದ, ಇಂದಿನಿಂದ (ಏಪ್ರಿಲ್ 17) ಏಪ್ರಿಲ್ 22ರವರೆಗೆ ಭಕ್ತಾದಿಗಳ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.


ಈ ಆರು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 8:30ರ ನಂತರವಷ್ಟೇ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಹಾಗೆಯೇ ರಾತ್ರಿ 8:00 ಗಂಟೆಯ ನಂತರ ಗರ್ಭಗುಡಿ ದರ್ಶನ ಇರುವುದಿಲ್ಲ, ಕೇವಲ ಹೊರಾಂಗಣದಿಂದ ಮಾತ್ರ ದರ್ಶನ ಪಡೆಯಲು ಅವಕಾಶವಿರುತ್ತದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆಯುವ ವಿಶೇಷ ಧಾರ್ಮಿಕ ವಿಧಿವಿಧಾನಗಳ ಸುಗಮ ನಿರ್ವಹಣೆಗಾಗಿ ಭಕ್ತಾದಿಗಳು ಈ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕೆಂದು ಕೋರಲಾಗಿದೆ.
ಬರಹ:- ಚೇತನ್ ದಾಸ್ ಹೊಸಮನೆ









