ಹೊಸನಗರದ ಜಯನಗರ ಬಳಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಹೊಸನಗರ: ತಾಲೂಕಿನ ಜಯನಗರ ಸಮೀಪದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಶಿವಮೊಗ್ಗ ಹಾಗೂ ಹೊಸನಗರ ಮಾರ್ಗವಾಗಿ ಕುಂದಾಪುರಕ್ಕೆ ತೆರಳುತ್ತಿದ್ದ ಈ ಖಾಸಗಿ ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಜಯನಗರ ಸಮೀಪದ ಕಡಿದಾದ ಚಾಮುಂಡಿ ಬೆಟ್ಟ ತಿರುವಿನಲ್ಲಿ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಿಂದಾಗಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಚಿಕಿತ್ಸೆಗಾಗಿ ಹೊಸನಗರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹೊಸನಗರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಮಾರ್ಗದಲ್ಲಿ ಚಲಿಸುವವರು ಜಾಗರೂಕರಾಗಿರಿ. ಚಾಮುಂಡಿ ಬೆಟ್ಟದ ತಿರುವುಗಳು ಸಾಕಷ್ಟು ಕಡಿದಾಗಿದ್ದು, ಮುಂಜಾನೆ ಸಮಯದಲ್ಲಿ ಮಂಜು ಅಥವಾ ರಸ್ತೆಯ ತಿರುವುಗಳ ಅಸ್ಪಷ್ಟತೆಯಿಂದಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ.

ಬರಹ: Chetandas Hosamane

Leave a Comment