ಶಿಕ್ಷಣ ಕ್ಷೇತ್ರದಲ್ಲಿ ಹೊಸ ಇತಿಹಾಸ: ಕೆಪಿಎಸ್ ಬೃಹತ್ ಕಾರ್ಯಕ್ರಮಕ್ಕೆ ಸಜ್ಜಾದ ಶಿವಮೊಗ್ಗ, ಮೈದಾನ ಪರಿಶೀಲಿಸಿದ ಸಚಿವರು

Photo of author

By vishwachetana807@gmail.com

ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ “ರಾಜ್ಯಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆ (KPS) ಅಡಿಗಲ್ಲು ಸಮಾರಂಭ”ದ ಹಿನ್ನೆಲೆಯಲ್ಲಿ, ಇಂದು ಶಿವಮೊಗ್ಗದ ‘ಅಲ್ಲಮ ಪ್ರಭು ಮೈದಾನ’ಕ್ಕೆ ಸಚಿವ ಮಧು ಬಂಗಾರಪ್ಪ ಅವರು ಉನ್ನತ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಲಿರುವ ಈ ಬೃಹತ್ ಕಾರ್ಯಕ್ರಮದ ವೇದಿಕೆ ನಿರ್ಮಾಣ, ಸಾರ್ವಜನಿಕ ಸೌಕರ್ಯ, ಟ್ರಾಫಿಕ್ ದಟ್ಟಣೆ ಹಾಗೂ ಭದ್ರತಾ ವ್ಯವಸ್ಥೆಗಳು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಮೂಡಿಬರಲು ಅಧಿಕಾರಿಗಳಿಗೆ ಅವರು ಇದೇ ವೇಳೆ ಸೂಕ್ತ ಸಲಹೆ ಮತ್ತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಘಟನೆಯಲ್ಲಿ ಬಸ್ ಚಾಲಕ ಸಂದೀಪ್ (ಸ್ಯಾಂಡಿ) ಅವರ ಕಾಲಿಗೆ ಗಾಯಗಳಾಗಿದ್ದು, ಇತರ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

​ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ನಿಖಿಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಶ್ ಬಾನು, ಜವಳಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಬರಹ: Chetandas Hosamane

Leave a Comment