KCET: ಕೋಣಂದೂರು ರಾಷ್ಟ್ರೀಯ (IND) ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನ ಹೇಮಂತ್, ವಿಧಾತ್ರಿಗೆ ಟಾಪ್ ರ್‍ಯಾಂಕ್

Photo of author

By vishwachetana807@gmail.com

ಶಿವಮೊಗ್ಗ: ಇತ್ತೀಚೆಗೆ ಪ್ರಕಟವಾದ 2026ರ ಕೆಸಿಇಟಿ (KCET) ಪರೀಕ್ಷೆಯ ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ರಾಷ್ಟ್ರೀಯ (IND) ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಹೇಮಂತ್ ಎಸ್. ಅವರು ಪಶುವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ 4072ನೇ ರ್‍ಯಾಂಕ್, ಕೃಷಿ ಬಿ.ಎಸ್ಸಿ ವಿಭಾಗದಲ್ಲಿ 4874ನೇ ರ್‍ಯಾಂಕ್ ಹಾಗೂ ಎಂಜಿನಿಯರಿಂಗ್ ವಿಭಾಗದಲ್ಲಿ 9803ನೇ ರ್‍ಯಾಂಕ್ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿನಿ ವಿಧಾತ್ರಿ ಕೆ. ವಿ. ಅವರು ಎಂಜಿನಿಯರಿಂಗ್ ವಿಭಾಗದಲ್ಲಿ 10774ನೇ ರ್‍ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿರುವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ.ಎಸ್. ವಾಸುದೇವ ಅವರು, “ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇದು ವಿದ್ಯಾರ್ಥಿಗಳ ಸತತ ಪರಿಶ್ರಮ, ಉಪನ್ಯಾಸಕರ ನಿರಂತರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಫಲವಾಗಿದೆ. ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಆಶಿಸುತ್ತೇನೆ” ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ನ್ಯಾಷನಲ್ ಎಜುಕೇಶನ್ ಸೊಸೈಟಿ (ರಿ), ಶಿವಮೊಗ್ಗ ಇದರ ಕಾರ್ಯದರ್ಶಿಗಳಾದ ಶ್ರೀ ಎಸ್.ಎನ್. ನಾಗರಾಜ್ ಮತ್ತು ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ತಮ್ಮ ಮಕ್ಕಳ ಈ ಅತ್ಯುತ್ತಮ ಸಾಧನೆಯನ್ನು ಕಂಡು ಪೋಷಕರು ಸಹ ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ.

ಬರಹ: ಚೇತನ್ ದಾಸ್ ಹೊಸಮನೆ

Leave a Comment