
ಹೊಸನಗರ: ಪಟ್ಟಣದ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಸೇತುವೆ ತಿರುವಿನಲ್ಲಿ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.
ಸಾಗರದಿಂದ ಹೊಸನಗರಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಜಯನಗರದಿಂದ ಆನಂದಪುರಕ್ಕೆ ತೆರಳುತ್ತಿದ್ದ ಲಾರಿ, ಸೇತುವೆಯ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ಪರಿಣಾಮ ಸಾಗರ-ಹೊಸನಗರ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಮಾಹಿತಿ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ ಪೊಲೀಸರು, ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


ಅದೃಷ್ಟವಶಾತ್, ಬಸ್‌ನಲ್ಲಿದ್ದ ಪ್ರಯಾಣಿಕರಿಗಾಗಲಿ ಅಥವಾ ವಾಹನಗಳ ಚಾಲಕರಿಗಾಗಲಿ ಯಾವುದೇ ರೀತಿಯ ಗಾಯಗಳಾಗಿಲ್ಲ. ಎಲ್ಲರೂ ಭಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಬರಹ: Chetandas Hosamane









