Hosanagara:ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ಮತ್ತು ಪ್ರಗತಿ ಪರಿಶೀಲನಾ ಸಭೆ

Photo of author

By vishwachetana807@gmail.com

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಪಕ್ಷದ ಸಂಘಟನೆಯನ್ನು ಬಲಪಡಿಸುವ ಮತ್ತು ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜುಲೈ 11, 2026ರ ಶನಿವಾರದಂದು ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಿದೆ. ರಿಪ್ಪನ್‌ಪೇಟೆಯ ಎಸ್.ಆರ್. ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಸಭೆಯು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಜರುಗಲಿದೆ.

ಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಮಹತ್ವ ಮತ್ತು ಪಕ್ಷದ ಮುಂದಿನ ಕಾರ್ಯತಂತ್ರಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಗುವುದು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅವರು ಈ ಸಭೆಗೆ ಪಕ್ಷದ ಎಲ್ಲಾ ಮುಖಂಡರು, ಘಟಕ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬಿ.ಎಲ್.ಎ. (BLA) ಗಳು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದ್ದಾರೆ.

ಬರಹ: Chetandas Hosamane

Leave a Comment