Hosanagara: ಪಿಎಂ ಶ್ರೀ ಶಾಲೆಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ; ಸಮಸ್ಯೆಗಳ ಆಲಿಸಿ ಅಭಿವೃದ್ಧಿಗೆ ಭರವಸೆ

Photo of author

By vishwachetana807@gmail.com

 

ಹೊಸನಗರ: ಜಿಲ್ಲಾ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು ಹುಲಿಕಲ್ ಘಾಟಿಯಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ ಪ್ರದೇಶದ ಕಾಮಗಾರಿ ಪರಿಶೀಲನೆಗೆ ತೆರಳುವ ಮಾರ್ಗ ಮಧ್ಯೆ ಹೊಸನಗರದ ಪಿಎಂ ಶ್ರೀ ಶಾಲೆಗೆ ಭೇಟಿ ನೀಡಿ ಶಾಲೆಯ ಮೂಲಸೌಕರ್ಯ ಹಾಗೂ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

 

ಶಾಲೆ ಮುಖ್ಯಶಿಕ್ಷಕರಿಂದ ಮತ್ತು ಸಿಬ್ಬಂದಿಯಿಂದ ಸಮಸ್ಯೆಗಳನ್ನು ಆಲಿಸಿದ ಸಚಿವರು, ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಶಾಲೆಯ ಭವಿಷ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆಯನ್ನೂ ನಡೆಸಿದರು.

ಬಳಿಕ ಸಚಿವರು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ನಂತರ ಹುಲಿಕಲ್ ಘಾಟಿಯತ್ತ ತೆರಳಿ, ಅಲ್ಲಿ ನಡೆಯುತ್ತಿರುವ ರಸ್ತೆ ಪುನರ್‌ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಭರತ್ ರಾಜ್,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಚಿದಂಬರ ಎಚ್.ಎಸ್. ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

ಬರಹ: Chetandas Hosamane

Leave a Comment