ಭದ್ರತೆ, ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಿದ ಪೊಲೀಸ್ ಇಲಾಖೆ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಎಸ್ಪಿ ನಿಖಿಲ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ಹಾಗೂ ಪರಿಶೀಲನೆಶಿವಮೊಗ್ಗ: ಜಿಲ್ಲೆಯ ಕೇಂದ್ರ ಕಾರಾಗೃಹದ ಭದ್ರತೆ ಮತ್ತು ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ನಿಖಿಲ್ ಅವರ ನೇತೃತ್ವದಲ್ಲಿ ಕಾರಾಗೃಹ ಅಧಿಕಾರಿಗಳು ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (ಕೆಎಸ್ಐಎಸ್ಎಫ್) ಅಧಿಕಾರಿಗಳೊಂದಿಗೆ ಮಹತ್ವದ ಆಂತರಿಕ ಭದ್ರತಾ ಸಭೆ ನಡೆಯಿತು.


ಸಭೆಯಲ್ಲಿ ಕಾರಾಗೃಹದ ಪ್ರಸ್ತುತ ಭದ್ರತಾ ವ್ಯವಸ್ಥೆ, ಕೈದಿಗಳ ಸುರಕ್ಷತೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು. ಸಭೆಯ ಬಳಿಕ ಎಸ್ಪಿ ನಿಖಿಲ್ ಅವರು ಕಾರಾಗೃಹದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳ ಭಾಗವಾಗಿ ಈ ಪರಿಶೀಲನೆ ಮತ್ತು ಸಭೆ ಮಹತ್ವ ಪಡೆದಿದೆ.
ಬರಹ: Chetandas Hosamane









