ಆಗಸ್ಟ್ 11ರಂದು ಹೊಸನಗರದಲ್ಲಿ ಆಯುಷ್ ವಿಶೇಷ ಆರೋಗ್ಯ ಶಿಬಿರ

Photo of author

By vishwachetana807@gmail.com

ತಜ್ಞ ಆಯುಷ್ ವೈದ್ಯರಿಂದ ಆರೋಗ್ಯ ತಪಾಸಣೆ; ಉಚಿತ ಔಷಧಿ ವಿತರಣೆ

ಹೊಸನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಆಯುಷ್ ವಿಶೇಷ ಆರೋಗ್ಯ ಶಿಬಿರ–2026 ಅನ್ನು ಆಗಸ್ಟ್ 11ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಬಸ್ ನಿಲ್ದಾಣದ ಸಮೀಪದ ಸಮುದಾಯ ಅಭಿವೃದ್ಧಿ ಕೇಂದ್ರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ತಾಲೂಕಿನ ನುರಿತ ಆಯುಷ್ ವೈದ್ಯರಾದ ಡಾ. ಕೆ.ವಿ. ಪತಂಜಲಿ, ಡಾ. ಜಿ.ಎಂ. ಹರೀಶ್, ಡಾ. ಪ್ರತಿಮಾ ಹಾಗೂ ಡಾ. ಪ್ರದೀಪ್ ಕುಮಾರ್ ಸೇರಿದಂತೆ ಹಲವು ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಸಂಧಿ-ಕೀಲು ನೋವು, ಚರ್ಮದ ಕಾಯಿಲೆ, ಅಲರ್ಜಿ, ಕೆಮ್ಮು, ಉಸಿರಾಟದ ಸಮಸ್ಯೆ, ಸ್ತ್ರೀರೋಗ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು. ಅಗತ್ಯವಿರುವವರಿಗೆ ಉಚಿತ ಔಷಧಿಗಳನ್ನು ವಿತರಿಸಲಾಗುತ್ತದೆ.
ಪಟ್ಟಣ ಪಂಚಾಯಿತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎನ್. ಹರೀಶ್ ಮನವಿ ಮಾಡಿದ್ದಾರೆ.

ಬರಹ: Chetandas Hosamane

Leave a Comment