ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ

Photo of author

By vishwachetana807@gmail.com

38 ಯುವಜನರಿಗೆ ನಾಯಕತ್ವ ತರಬೇತಿ; ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್‌ನ ನೂತನ ವೆಬ್‌ಸೈಟ್ ಬಿಡುಗಡೆ

ಹೊಸನಗರ: ಯುವಜನರಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ್ಯ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್, ಹೊಸನಗರ ಹಾಗೂ ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ಆಯೋಜಿಸಿದ್ದ “IGNITE GenZ Connect” ವಿಶೇಷ ನಾಯಕತ್ವ ತರಬೇತಿ ಕಾರ್ಯಕ್ರಮವು ಆಗಸ್ಟ್ 15ರಂದು ಬಟ್ಟೆಮಲ್ಲಪ್ಪದ ಸಾರಾ ಸೆಂಟರ್‌ನಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಒಟ್ಟು 38 ಯುವಜನರು ಉತ್ಸಾಹದಿಂದ ಪಾಲ್ಗೊಂಡರು. ತಂಡದೊಂದಿಗೆ ಕೆಲಸ ಮಾಡುವ ಸಾಮರ್ಥ್ಯ, ನಾಯಕತ್ವದ ಕೌಶಲ್ಯ ಹಾಗೂ ವೈಯಕ್ತಿಕ ವಿಕಸನಕ್ಕೆ ಅಗತ್ಯವಾದ ಅಂಶಗಳ ಕುರಿತು ವಿವಿಧ ಚಟುವಟಿಕೆಗಳು ಮತ್ತು ಪ್ರಾಯೋಗಿಕ ಕಲಿಕೆಯ ಮೂಲಕ ತರಬೇತಿ ನೀಡಲಾಯಿತು.

ತರಬೇತುದಾರ ವಿನಾಯಕ ಅರಮನೆ ಅವರು ಯುವಜನರನ್ನು ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ನಾಯಕತ್ವದ ಅಗತ್ಯತೆ ಮತ್ತು ಅದರ ಮಹತ್ವವನ್ನು ಪರಿಚಯಿಸಿದರು. ತರಬೇತಿಯ ಮೂಲಕ ಯುವಜನರು ಹೊಸ ಅನುಭವ ಹಾಗೂ ಕೌಶಲ್ಯಗಳನ್ನು ಪಡೆದುಕೊಂಡರು.

ಕಾರ್ಯಕ್ರಮಕ್ಕೆ ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್ ಮಾಲೀಕ ವಿನಾಯಕ ಕರಬ, ಜೆಸಿಐ ಹೊಸನಗರ ಡೈಮಂಡ್ ಅಧ್ಯಕ್ಷ ಜೆಸಿ ಸಂದೀಪ್ ಹೆಚ್. ಹಾಗೂ ಸಾರಾ ಸಂಸ್ಥೆಯ ಪ್ರಮುಖರು ಸಹಕಾರ ನೀಡಿದರು. ಯುವಜನರು ಇಂತಹ ತರಬೇತಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್‌ನ ನೂತನ ವೆಬ್‌ಸೈಟ್ ಅನ್ನು ಬಿಡುಗಡೆ ಮಾಡಲಾಯಿತು. ಸಂಸ್ಥೆಯ ವಿವಿಧ ಕೋರ್ಸ್‌ಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ವೆಬ್‌ಸೈಟ್ ರೂಪಿಸಲಾಗಿದೆ.

ತರಬೇತಿ ಪೂರ್ಣಗೊಳಿಸಿದ 38 ಯುವಜನರಿಗೆ ಪ್ರಮಾಣಪತ್ರಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಸಮಾರೋಪಗೊಳಿಸಲಾಯಿತು. ಸ್ವಾತಂತ್ರ್ಯ ದಿನದಂದು ನಡೆದ ಈ ಕಾರ್ಯಕ್ರಮವು ಯುವಜನರಲ್ಲಿ ಆತ್ಮವಿಶ್ವಾಸ, ಹೊಸ ಚಿಂತನೆ ಹಾಗೂ ನಾಯಕತ್ವದ ಆಸಕ್ತಿಯನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು.

ಬರಹ: Chetandas Hosamane

Leave a Comment