ಕರಿನಗೊಳ್ಳಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಅ. 11ರಿಂದ ನವರಾತ್ರಿ ಮಹೋತ್ಸವ

Photo of author

By vishwachetana807@gmail.com

ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ

ಹೊಸನಗರ ಕರಿನಗೊಳ್ಳಿ: ಎಂ. ಗುಡ್ಡೆಕೊಪ್ಪದ ಶ್ರೀ ಮಾರಿಕಾಂಬಾ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ (ರಿ.) ವತಿಯಿಂದ ಕರಿನಗೊಳ್ಳಿಯ ಶ್ರೀ ಮಾರಿಕಾಂಬಾ ದೇವಿಯ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

2026ರ ಅಕ್ಟೋಬರ್ 11ರ ಭಾನುವಾರದಿಂದ ಅಕ್ಟೋಬರ್ 21ರ ಬುಧವಾರದವರೆಗೆ ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮಹೋತ್ಸವದ ಒಂಬತ್ತು ದಿನಗಳ ಅವಧಿಯಲ್ಲಿ ಪ್ರತಿದಿನ ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 8 ಗಂಟೆಗೆ ಮತ್ತೊಮ್ಮೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಜರುಗಲಿದೆ. ರಾತ್ರಿ 9 ಗಂಟೆಗೆ ದೇವಿಯ ಸನ್ನಿಧಿಯಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.


ನವರಾತ್ರಿ ಮಹೋತ್ಸವದಲ್ಲಿ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾಗಬೇಕು. ಅಲ್ಲದೆ, ಧಾರ್ಮಿಕ ಕಾರ್ಯಕ್ರಮಗಳಿಗೆ ತನು, ಮನ ಹಾಗೂ ಧನದಿಂದ ಸಹಕರಿಸಬೇಕೆಂದು ದೇವಸ್ಥಾನದ ಟ್ರಸ್ಟ್ ವತಿಯಿಂದ ಮನವಿ ಮಾಡಲಾಗಿದೆ.
ಮಹೋತ್ಸವಕ್ಕೆ ಸಮಸ್ತ ಭಕ್ತಾದಿಗಳು ಹಾಗೂ ಊರಿನ ಜನತೆಗೆ ಆತ್ಮೀಯ ಸ್ವಾಗತ ಕೋರಲಾಗಿದೆ.

ಬರಹ: Chetandas Hosamane

Leave a Comment