Sagara:ಆನಂದಪುರ–ಶಿಕಾರಿಪುರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Photo of author

By vishwachetana807@gmail.com

ಆನಂದಪುರ: ಶಿಕಾರಿಪುರ–ಬೈರಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ (ಜ.12) ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬೈರಾಪುರ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕಿಲೋಮೀಟರ್ ಬೋರ್ಡ್‌ಗೆ ಬೈಕ್ ಸವಾರ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ, ತ್ಯಾಗರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆಕೊಪ್ಪ ಗ್ರಾಮದ ನಿವಾಸಿ ರಮೇಶ್ (55) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೂಲತಃ ಕೃಷಿಕರಾಗಿದ್ದ ರಮೇಶ್ ಅವರು ಶಿಕಾರಿಪುರದಿಂದ ತಮ್ಮ ಸ್ವಗ್ರಾಮ ಕೋಟೆಕೊಪ್ಪಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೈಕ್ ವೇಗವಾಗಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಮೀಟರ್ ಬೋರ್ಡ್‌ಗೆ ಢಿಕ್ಕಿ ಹೊಡೆದ ರಭಸಕ್ಕೆ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ಮಾಹಿತಿ ಪಡೆದ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment