ಹರಿದ್ರಾವತಿಯ ದಂಡಿಗೆಯಲ್ಲಿ ಭಕ್ತಿ–ಸೇವೆಯ ಸಂಗಮ

Photo of author

By vishwachetana807@gmail.com

ಹರಿದ್ರಾವತಿಯ ಶ್ರೀ ಕ್ಷೇತ್ರ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಹೊಸನಗರ: ತಾಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಂಡಿಗೆ ಸ್ಥಳದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭಾನುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಐದನೇ ವರ್ಷದ ಮಹೋತ್ಸವದ ಅಂಗವಾಗಿ ನಡೆದ ದೇವತಾ ಕಾರ್ಯಗಳಲ್ಲಿ ಅವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ದಿವಂಗತ ಶ್ರೀಮತಿ ಸರ್ವಸಿದ್ಧಿಯಮ್ಮ ಅವರ ಪುತ್ರಿ ಶ್ರೀಮತಿ ಸುಜಾತ ಹಾಗೂ ಪುತ್ರ ಸುದೀಪ್ ಮತ್ತು ಕುಟುಂಬದವರು ಶಾಸಕರಿಗೆ ಆತ್ಮೀಯ ಸ್ವಾಗತ ಕೋರಿದರು.

ಶಾಸಕರೊಂದಿಗೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕಿ ಮಂಜು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಆರ್. ಪ್ರಭಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಆರೋಗ್ಯ ರಕ್ಷಾ ಸಮಿತಿಯ ಗೋಪಿನಾಥ್ ಸೇರಿದಂತೆ ಹಲವಾರು ಗಣ್ಯರು ಹಾಗೂ ನೂರಾರು ಭಕ್ತರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಸಲಾಗಿದ್ದು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಪಂಚೆ–ಶಾಲು ಹಾಗೂ ಮಹಿಳೆಯರಿಗೆ ವಸ್ತ್ರ ವಿತರಣೆ ಮಾಡಲಾಯಿತು.

ಈ ವೇಳೆ ದೇವಾಲಯ ಸಮಿತಿಯವರು ಶಾಸಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

Leave a Comment