
ಹೊಸನಗರ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಹೊಸನಗರದ ಗಾಂಧಿ ಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎಂ. ಸದಾಶಿವ ಶ್ರೇಷ್ಠಿ ಅವರ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸಂಭ್ರಮಾಚರಣೆ ನಡೆಸಿದರು.

ಪ್ರಮಾಣ ವಚನ ಸಮಾರಂಭದ ನೇರಪ್ರಸಾರವನ್ನು ವೀಕ್ಷಿಸಲು ಗಾಂಧಿ ಮಂದಿರದಲ್ಲಿ ವಿಶೇಷ ಟಿವಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ, ಡಿ.ಎಂ. ಸದಾಶಿವ ಶ್ರೇಷ್ಠಿ ಅವರ ನೇತೃತ್ವದಲ್ಲಿ ನೆರೆದಿದ್ದ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು.

ಈ ಸಂಭ್ರಮಾಚರಣೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಟೌನ್ ಘಟಕದ ಅಧ್ಯಕ್ಷ ಗುರುರಾಜ್ ಕೆ.ಎಸ್., ಅಶ್ವಿನಿ ಕುಮಾರ್ ಎಮ್ ಪಿ ಸುರೇಶ್ ,ಶ್ರೀದೇವಿ ಮತ್ತು ನೂರಾ ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಜೈ ಲಕ್ಷ್ಮಿ ಸುಬ್ರಾಯ ಪ್ರಮುಖ ಮುಖಂಡರಾದ ಕಳೂರು ಕೃಷ್ಣಮೂರ್ತಿ, ಲೋಕೇಶ್, ಬಾಬಣ್ಣ, ಬೃಂದಾವನ ಪ್ರವೀಣ್, ಗಣೇಶ್ ಬಾಳೆಕೊಪ್ಪ, ಗುರು ಜಯನಗರ, ನೇತ್ರಾವತಿ ಭಟ್ ಸೇರಿದಂತೆ ಹಲವು ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಬರಹ: ಚೇತನ್ ದಾಸ್ ಹೊಸಮನೆ









