ನೀಟ್ ಪರೀಕ್ಷಾ ಅಕ್ರಮ ಹಾಗೂ ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ

Photo of author

By vishwachetana807@gmail.com

 

ಹೊಸನಗರ:ದೆಹಲಿಯಲ್ಲಿ ನೀಟ್ (NEET) ಪರೀಕ್ಷೆ ಹಗರಣ ಖಂಡಿಸಿ ಹಾಗೂ ಸೂಕ್ತ ತನಿಖೆ ಅಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಂಧನ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡಿಸಿ, ಹೊಸನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಜಿ. ಚಂದ್ರಮೋಳಿ ನೇತೃತ್ವದಲ್ಲಿ ಹೊಸನಗರದ ಕೋರ್ಟ್ ಸರ್ಕಲ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಟೈರ್‌ಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ:
ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಜಿ. ಚಂದ್ರಮೋಳಿ, “ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು, ತಕ್ಷಣ ನೀಟ್ ಹಗರಣದ ಬಗ್ಗೆ ಸೂಕ್ತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಬಲವಂತವಾಗಿ ಹತ್ತಿಕ್ಕುತ್ತಿರುವುದು ಖಂಡನೀಯ” ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕಿ ಮಂಜು , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಮಹಿಳಾ ಅಧ್ಯಕ್ಷೆ ಸುಮಸುಬ್ರಮಣ್ಯ , ಬಂಡಿ ರಾಮಚಂದ್ರ, ಎಂಪಿ ಸುರೇಶ್ , ವಿಶ್ವನಾಥ್ ನಾಗೂಡಿ, ಕರುಣಾಕರ ಶೆಟ್ಟಿ ನಗರ , ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬರಹ: Chetandas Hosamane

Leave a Comment