
ಹೊಸನಗರದ ಪ್ರತಿಷ್ಠಿತ ಅಖಿಲ ಭಾರತ ಹಿಂದೂ ಮಹಾಸಭಾ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಮುಂದಿನ ಎರಡು ಅವಧಿಗೆ ಆಯ್ಕೆ ಮಾಡಲಾಗಿದೆ. ಸಮಿತಿಯ ನೂತನ ಅಧ್ಯಕ್ಷರಾಗಿ ಗಣೇಶ್ ಮಧುಕರ್ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ವಿನಾಯಕ ಶ್ರೇಷ್ಟಿ, ಕಾರ್ಯದರ್ಶಿಯಾಗಿ ಅನುಪ ಅರವಿಂದ್, ಪ್ರಧಾನ ಕೋಶಾಧಿಕಾರಿಯಾಗಿ ನಾಗರಾಜ್ ಅರ್ ಹಾಗೂ ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾಗಿ ಮಂಜುನಾಥ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.


ಆಯ್ಕೆಯ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಗಣೇಶ್ ಮಧುಕರ್, ಸಮಾಜದ ಸಂಘಟನೆ, ಸೇವಾ ಕಾರ್ಯ, ಗೋಸೇವೆ ಹಾಗೂ ವ್ಯಕ್ತಿತ್ವ ವಿಕಾಸದ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿರುವ ಸಮಿತಿಯ ಜವಾಬ್ದಾರಿಯನ್ನು ನೀಡಿರುವ ಎಲ್ಲ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಜೊತೆಗೆ, ತಮ್ಮ ಸಮಿತಿಯು ಧಾರ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಿದೆ. ಈ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಸಮಾಜದ ಎಲ್ಲಾ ಸಮುದಾಯದವರನ್ನು ಒಗ್ಗೂಡಿಸಿಕೊಂಡು, ಸಂಘಟಿತ ಸಮಾಜದ ಮೂಲಕ ಈ ಧಾರ್ಮಿಕ ಕಾರ್ಯವನ್ನು ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ರಮೇಶ್ ಹಲಸಿನ ಕಟ್ಟೆ, ರಾಧಾಕೃಷ್ಣ ಪೂಜಾರಿ, ಸುರೇಂದ್ರ ಕೋಟ್ಯಾನ್, ಆಟೋ ಪ್ರಶಾಂತ್, ಸಂತೋಷ್ ಶ್ರೀ ನಂದಿ, ವಿನಯ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬರಹ: Chetandas Hosamane









