ಶಿವಮೊಗ್ಗ:
ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಶಿವಮೊಗ್ಗ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 2026–27ನೇ ಸಾಲಿಗೆ ಶಿವಮೊಗ್ಗ ಜಿಲ್ಲಾ ಕ್ರೀಡಾ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ.
5ನೇ ತರಗತಿ, 8ನೇ ತರಗತಿ ಹಾಗೂ ಪ್ರಥಮ ಪಿ.ಯು.ಸಿ.ಗೆ ಪ್ರವೇಶ ಪಡೆಯಲು ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಈ ಅವಕಾಶ ಲಭ್ಯವಿದೆ. ಅಥ್ಲೆಟಿಕ್ಸ್, ಕುಸ್ತಿ, ಹಾಕಿ, ಫುಟ್ಬಾಲ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಪ್ರತಿಭೆ ಹೊಂದಿರುವ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ, ಆಹಾರ ಹಾಗೂ ಪರಿಣತ ತರಬೇತುದಾರರಿಂದ ಗುಣಮಟ್ಟದ ಕ್ರೀಡಾ ತರಬೇತಿ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಲಾಗುತ್ತದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮನವಿ ಮಾಡಿದೆ.

🏅 ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿ
ಶಿವಮೊಗ್ಗ ಜಿಲ್ಲಾ ಕ್ರೀಡಾ ವಸತಿ ನಿಲಯಗಳು
•ವಿಶೇಷ ಸೂಚನೆ:
ಶಿವಮೊಗ್ಗ ಜಿಲ್ಲಾ ಕ್ರೀಡಾ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆ ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವನ್ನು ಅಭ್ಯರ್ಥಿಗಳಿಂದ ವಸೂಲಿ ಮಾಡಲಾಗುವುದಿಲ್ಲ.
• ಸಂಪರ್ಕ ಮಾಹಿತಿ (ಹೆಚ್ಚಿನ ವಿವರಗಳಿಗೆ):
• ಕಚೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ
• ದೂರವಾಣಿ: 98806 53266 / 99028 51909 / 89047 04771







