Thirthahalli :ಜನವರಿ 16
ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದಲೇ ಕೆಪಿಸಿಸಿ ನಿರ್ದೇಶನದಂತೆ ಮಾಜಿ ಸಚಿವ ಶ್ರೀ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಯುಪಿಎ ಸರ್ಕಾರವು 2005ರಲ್ಲಿ ಜಾರಿಗೆ ತಂದಿದ್ದ ಗ್ರಾಮೀಣ ಕಾರ್ಮಿಕರಿಗೆ ಉದ್ಯೋಗ ಭರವಸೆ ನೀಡುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಯನ್ನು ಈಗಿನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಿದ್ದುಪಡಿ ಮಾಡಿ VBG–RAM–G ಕಾಯ್ದೆ ತರುವ ಮೂಲಕ ಅದರ ಮೂಲ ಸ್ವರೂಪವನ್ನೇ ಬದಲಾಯಿಸಲು ಮುಂದಾಗಿದೆ ಎಂಬ ಆರೋಪದ ಹಿನ್ನೆಲೆ ಈ ಸತ್ಯಾಗ್ರಹ ನಡೆಯಿತು.



ಈ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಪಕ್ಷದ ಮುಖಂಡರು, ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸರ್ಕಾರದ ನಾಮನಿರ್ದೇಶಿತ ಸದಸ್ಯರು, ಪಕ್ಷದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.







