
ಮಂಡ್ಯ: ರಾಷ್ಟ್ರ ರಾಜಕಾರಣದಲ್ಲಿ ಮಿನುಗಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯದ ಹೆಮ್ಮೆಯ ನಾಯಕ ಶ್ರೀ ಎಸ್.ಎಂ. ಕೃಷ್ಣ ಅವರ ಹೆಸರಿನಲ್ಲಿ ಮಂಡ್ಯ ಕರ್ನಾಟಕ ಸಂಘವು ಸ್ಥಾಪಿಸಿರುವ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿಗೆ ಈ ಬಾರಿ ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಿಕ್ಷಣ ಸಚಿವ ಶ್ರೀ ಕಿಮ್ಮನೆ ರತ್ನಾಕರ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜಕೀಯ ಸಾಧನೆಗೆ ಸಂದ ಗೌರವ:
ರಾಜಕೀಯ, ಸಂಗೀತ ಅಥವಾ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸುವ ಸಲುವಾಗಿ ಮಂಡ್ಯ ಕರ್ನಾಟಕ ಸಂಘವು ಈ ದತ್ತಿನಿಧಿ ಪ್ರಶಸ್ತಿಯನ್ನು ಸ್ಥಾಪಿಸಿದೆ. ಪ್ರಥಮ ವರ್ಷದ ಪ್ರಶಸ್ತಿಗೆ ಕಿಮ್ಮನೆ ರತ್ನಾಕರ್ ಅವರ ರಾಜಕೀಯ ಜೀವನದ ನಿಸ್ವಾರ್ಥ ಸೇವೆ ಹಾಗೂ ಸುದೀರ್ಘ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಈ ಪ್ರಶಸ್ತಿಯು 50,000/- ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.
ಮೇ 5 ರಂದು ಪ್ರಶಸ್ತಿ ಪ್ರದಾನ:
ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ದಿನಾಂಕ 05.05.2026ರ ಮಂಗಳವಾರ ಸಂಜೆ 5:00 ಗಂಟೆಗೆ ಮಂಡ್ಯದ ಕರ್ನಾಟಕ ಸಂಘದ ಆವರಣದಲ್ಲಿರುವ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಅದ್ಧೂರಿಯಾಗಿ ಜರುಗಲಿದೆ.
ನಾಡಿನ ಶ್ರೇಷ್ಠ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರ ಹೆಸರಿನ ಮೊದಲ ಪ್ರಶಸ್ತಿಯು ಸಜ್ಜನ ರಾಜಕಾರಣಿ ಎಂದೇ ಹೆಸರಾದ ಕಿಮ್ಮನೆ ರತ್ನಾಕರ್ ಅವರಿಗೆ ಸಂದಿರುವುದು ಅವರ ಅಭಿಮಾನಿಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ಸಂತಸ ಮೂಡಿಸಿದೆ.
ಬರಹ: Chetandas Hosamane









