
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 622 ಹುದ್ದೆಗಳ ನೇಮಕಾತಿಗೆ ಈ ಫಲಿತಾಂಶ ಸಂಬಂಧಿಸಿದೆ.

ಈ ನೇಮಕಾತಿ ಪ್ರಕ್ರಿಯೆಯಡಿ ನಡೆದ ಪರೀಕ್ಷೆಯ ಕುರಿತು ಉದ್ಭವಿಸಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ, ಡಿಸೆಂಬರ್ 27 ಮತ್ತು 28ರಂದು ಮರುಪರೀಕ್ಷೆ ನಡೆಸಲಾಗಿತ್ತು. ಮರುಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಇದೀಗ ಅಂತಿಮ ಅರ್ಹತಾ ಪಟ್ಟಿ ಪ್ರಕಟಿಸಲಾಗಿದೆ.



ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಅಂಕಪಟ್ಟಿ ಮತ್ತು ವಿವರಗಳನ್ನು KEA, KPCLಗೆ ಹಸ್ತಾಂತರಿಸಲಿದೆ. ಮುಂದಿನ ನೇಮಕಾತಿ ಪ್ರಕ್ರಿಯೆ, ದಾಖಲೆ ಪರಿಶೀಲನೆ ಹಾಗೂ ನೇಮಕಾತಿ ಆದೇಶಗಳನ್ನು KPCL ಕೈಗೊಳ್ಳಲಿದೆ.ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು KEA ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ ಎಂದು KEA ಪ್ರಕಟಣೆ ತಿಳಿಸಿದೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು KEA ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ ಎಂದು KEA ಪ್ರಕಟಣೆ ತಿಳಿಸಿದೆ
#KEARecruitment: #KPCL ನ (ಕರ್ನಾಟಕ ವಿದ್ಯುತ್ ನಿಗಮ) ಒಟ್ಟು 622 ಹುದ್ದೆಗಳ ನೇಮಕಾತಿ ಸಂಬಂಧ ಡಿ.27 ಮತ್ತು 28ರಂದು ನಡೆದ ಮರು ಪರೀಕ್ಷೆಯ ಅಂತಿಮ ಫಲಿತಾಂಶವನ್ನು #KEA ಪ್ರಕಟಿಸಿದೆ. ಶೀಘ್ರದಲ್ಲೇ ಅಭ್ಯರ್ಥಿಗಳು ಪಡೆದ ಅಂಕಗಳ ವಿವರ ಸಮೇತ ಪೂರ್ಣ ಪಟ್ಟಿಯನ್ನು ಕೆಪಿಸಿಎಲ್ ಗೆ ಹಸ್ತಾಂತರ ಮಾಡಲಾಗುತ್ತದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) January 7, 2026
ತಾತ್ಕಾಲಿಕ ಫಲಿತಾಂಶಕ್ಕೆ ಬಂದ…







