ಹೊಸನಗರ: ಭಾರತದ ಸಂವಿಧಾನ ಜಾರಿಗೆ ಬಂದ ದಿನದ ಸ್ಮರಣಾರ್ಥವಾಗಿ ಪ್ರತಿವರ್ಷ ಜನವರಿ 26ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ದೇಶದ ಭವ್ಯ ಸೇನಾ ಹಾಗೂ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುತ್ತದೆ.

ಶಾಸಕ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಆದೇಶದಂತೆ, ಪಟ್ಲ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಲು ಹೊಸನಗರ ತಾಲೂಕಿನ ವಿದ್ಯಾರ್ಥಿಗಳು ದೆಹಲಿಗೆ ತೆರಳಿದರು.

ಈ ಸಂದರ್ಭ ಹೊಸನಗರ ತಾಲೂಕು ದಂಡಾಧಿಕಾರಿ ಭರತ್ ರಾಜ್, ತಾಲೂಕ್ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಹರೀಶ್, ತಾಲೂಕ್ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ಎರಗಿ ಉಮೇಶ್, ಸಂಘದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ನಾಗರಿಕರು ಹಾಗೂ ಜೆಸಿ ಡೈಮಂಡ್ ಅಧ್ಯಕ್ಷರು ಮತ್ತು ಸದಸ್ಯರು ವಿದ್ಯಾರ್ಥಿಗಳಿಗೆ ಹೊಸನಗರದಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು
ಜನವರಿ 26ರ ಗಣರಾಜ್ಯೋತ್ಸವ ಪೆರೇಡ್‌ನ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಹೊಸನಗರ ತಾಲೂಕಿನ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ.



ರಾಷ್ಟ್ರಮಟ್ಟದ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಅವಕಾಶ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಹೂಗುಚ್ಛ ನೀಡಿ ಕಳುಹಿಸಿದ ಸ್ಥಳೀಯ ಮುಖಂಡರು ಹಾಗೂ ಸಂಘಟನೆಗಳ ಪ್ರತಿನಿಧಿಗಳು.

ವಿದ್ಯಾರ್ಥಿಗಳ ಈ ಭಾಗವಹಿಸುವಿಕೆ ರಾಷ್ಟ್ರಮಟ್ಟದಲ್ಲಿ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಲಿದೆ ಎಂದು ಉಪಸ್ಥಿತ ಮುಖಂಡರು ಶುಭಹಾರೈಸಿದರು.







