Shivamogga:ಸಾಗರ ಮಾರಿಕಾಂಬಾ ಜಾತ್ರೆ: ಪ್ರಯಾಣಿಕರಿಗೆ ಸಿಹಿ ಸುದ್ದಿ – ಯಶವಂತಪುರ–ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ವಿಸ್ತರಣೆ

Photo of author

By vishwachetana807@gmail.com

ಶಿವಮೊಗ್ಗ: ಸಾಗರ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಫೆಬ್ರವರಿ 3ರಿಂದ 11ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಭಕ್ತಾದಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ರೈಲ್ವೆ ಇಲಾಖೆ ವಿಶೇಷ ಸೌಲಭ್ಯ ಕಲ್ಪಿಸಲು ಮುಂದಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುತ್ತಿರುವ ರೈಲು ಸಂಖ್ಯೆ 16581/82 (ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್) ಅನ್ನು ಜಾತ್ರೆಯ ಅವಧಿಯಲ್ಲಿ ಪ್ರತಿದಿನವೂ ಸಂಚರಿಸುವಂತೆ ಹಾಗೂ ಈ ರೈಲನ್ನು ಶಿವಮೊಗ್ಗದಿಂದ ಸಾಗರದ ಸಮೀಪದ ತಾಳಗುಪ್ಪ ನಿಲ್ದಾಣದವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಶೀಘ್ರದಲ್ಲಿಯೇ ವಿಶೇಷ ರೈಲು ಸೌಲಭ್ಯಕ್ಕೆ ಸಂಬಂಧಿಸಿದ ಆದೇಶ ಹೊರಡಿಸುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ಮೂರು ವರ್ಷಕ್ಕೊಮ್ಮೆ ನಡೆಯುವ ಈ ಐತಿಹಾಸಿಕ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 25 ರಿಂದ 30 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರ ದಟ್ಟಣೆ ನಿಯಂತ್ರಿಸುವುದು ಹಾಗೂ ಸುರಕ್ಷಿತ, ಸುಗಮ ಪ್ರಯಾಣ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ರೈಲು ವ್ಯವಸ್ಥೆ ಜಾರಿಗೊಳ್ಳುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment