Sagara: ಮಾರಿಕಾಂಬಾ ಜಾತ್ರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

Photo of author

By vishwachetana807@gmail.com

ಸಾಗರ: ಸಾಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಪ್ರಯುಕ್ತ ಸಾಗರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾಗರ ಕ್ಷೇತ್ರದ ಶಾಸಕರಾದ ಹಾಗೂ ಅರಣ್ಯ ಮತ್ತು ಕೈಗಾರಿಕಾ ನಿಗಮ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ಅವರು ಭಾಗವಹಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿದ ಸಂದರ್ಭ. ಭಕ್ತರು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನಗರಕ್ಕೆ ಆಗಮಿಸುವ ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಮತ್ತು ಸುಗಮ ಸಂಚಾರ ವ್ಯವಸ್ಥೆ ಒದಗಿಸುವ ಉದ್ದೇಶದಿಂದ ಆಡಳಿತ ಪಕ್ಷ ಈ ಜನಪರ ಹಾಗೂ ದೂರದೃಷ್ಟಿಯ ನಿರ್ಧಾರವನ್ನು ಕೈಗೊಂಡಿದೆ.

ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭ. ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕೆಳಕಂಡ ಪ್ರಮುಖ ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು:

:ಸಾಗರ ನಗರದ ಶ್ರೀ ಮಾರಿಕಾಂಬಾ ತವರು ಮನೆ ಹಾಗೂ ಗಂಡನ ಮನೆ ಎದುರಿನ ರಸ್ತೆ ಡಾಂಬರೀಕರಣ ಕಾಮಗಾರಿ

:ಉಪ್ಪಾರಕೇರಿಯಿಂದ ಶರಾವತಿ ಕೂಲ್ ಡ್ರಿಂಕ್ಸ್ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿ

ಸಾಗರ ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಮತ್ತು ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂತಸ ವ್ಯಕ್ತಪಡಿಸಿದರು.


ಜಾತ್ರಾ ದಿನಗಳಲ್ಲಿ ಹೆಚ್ಚಿನ ಸಂಚಾರ ಹೊಂದಿರುವ ಈ ರಸ್ತೆಗಳಲ್ಲಿ ಸುಧಾರಣೆ ಕೈಗೊಳ್ಳುವುದರಿಂದ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಪ್ರಯಾಣ ಸೌಲಭ್ಯ ದೊರೆಯಲಿದೆ. ಹದಗೆಟ್ಟ ರಸ್ತೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಈ ಕ್ರಮವನ್ನು ಸಾರ್ವಜನಿಕರು ಹಾಗೂ ಸ್ಥಳೀಯ ನಿವಾಸಿಗಳು ಸ್ವಾಗತಿಸಿದ್ದಾರೆ.

ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಆಡಳಿತ ಪಕ್ಷದ ಈ ನಿರ್ಧಾರವು ಜನಹಿತವೇ ಆಡಳಿತದ ಪ್ರಧಾನ ಗುರಿಯೆಂಬುದನ್ನು ಸ್ಪಷ್ಟಪಡಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ಸಾಗರ ನಗರದಲ್ಲಿ ಜಾರಿಗೆ ಬರಲಿವೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

Leave a Comment