SAGARA:Anandpura:ಹಾವು ಕಚ್ಚಿ ವೃದ್ಧೆ ಸಾವು

Photo of author

By vishwachetana807@gmail.com

Snake-bite-woman-death-sagar

ಸಾಗರ: ತಾಲೂಕಿನ ಆನಂದಪುರ  ಹೋಬಳಿಯ ಬಳ್ಳಿಬೈಲು ಗ್ರಾಮದಲ್ಲಿ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಬಳ್ಳಿಬೈಲು ಗ್ರಾಮದ ಪುಟ್ಟಪ್ಪ ಅವರ ಪತ್ನಿ ಲಕ್ಷ್ಮಮ್ಮ (71) ಅವರು ಶುಕ್ರವಾರ ಬೆಳಿಗ್ಗೆ ಅಡಿಕೆ ತೋಟದಲ್ಲಿ ಕಳೆ ಸವರುತ್ತಿದ್ದ ವೇಳೆ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥರಾದ ಲಕ್ಷ್ಮಮ್ಮ ಅವರನ್ನು ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಗಮನಿಸಿ, ತಕ್ಷಣ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಮ್ಮ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment